AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಒಟ್ಟು 309 ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲರ್ ವಿಭಾಗ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಸಂಸತ್ತಿನ ಕಾಯಿದೆಯಿಂದ ಸ್ಥಾಪಿಸಲ್ಪಟ್ಟ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿಯ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ನೇಮಕಾತಿಯ ವಿವರಗಳು
- ಸಂಸ್ಥೆಯ ಹೆಸರು : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)
- ಹುದ್ದೆಯ ಹೆಸರು : ಜೂನಿಯರ್ ಎಕ್ಸಿಕ್ಯುಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)
- ಒಟ್ಟು ಹುದ್ದೆಗಳು : 309 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಭಾರತದಾದ್ಯಂತ
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಹುದ್ದೆಯ ವಿವರಗಳು
ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲರ್) : 309
ಶೈಕ್ಷಣಿಕ ಅರ್ಹತೆ :
- ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ (ಗಣಿತ ಅಥವಾ ಭೌತಶಾಸ್ತ್ರ/ವಿಜ್ಞಾನ ಜೊತೆಗೆ) ಅಥವಾ ಬಿಇ/ಬಿಟೆಕ್ ಪದವಿ ಹೊಂದಿರಬೇಕು
- ಆಕಾಂಕ್ಷಿಗಳು ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಈ ಪದವಿಯನ್ನು ಪೂರ್ಣಗೊಳಿಸಿರಬೇಕು
- ಆಂಗ್ಲ ಭಾಷೆಯ ಅಗತ್ಯವಿದೆ
ವಯೋಮಿತಿ :
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 27 ವರ್ಷಗಳು
ವಯೋಮಿತಿ ಸಡಿಲಿಕೆ :
ಒಬಿಸಿ (NCL) ಆಕಾಂಕ್ಷಿಗಳಿಗೆ : 03 ವರ್ಷಗಳು
ಎಸ್ ಸಿ / ಎಸ್ ಟಿ ಆಕಾಂಕ್ಷಿಗಳಿಗೆ : 05 ವರ್ಷಗಳು
ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 10 ವರ್ಷಗಳು
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಮಾಸಿಕ ವೇತನ
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ರೂ. 40,000/-ರಿಂದ ರೂ. 1,40,000/-ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹಾಗೂ ಇತರ ಅನೇಕ ಸೌಲಭ್ಯಗಳು ಲಭ್ಯವಿರುತ್ತವೆ.
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಅರ್ಜಿ ಶುಲ್ಕ
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಆಕಾಂಕ್ಷಿಗಳು / ಅಪ್ರೆಂಟಿಸ್‌ಗಳು: ಶುಲ್ಕ ವಿನಾಯಿತಿ
- ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ. 1,000 (ಜಿಎಸ್‌ಟಿ ಸೇರಿದಂತೆ)
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಕಂಡ ಹಂತಗಳನ್ನು ಒಳಗೊಂಡಿದೆ
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ಡಾಕ್ಯುಮೆಂಟ್ ಪರಿಶೀಲನೆ
- ಧ್ವನಿ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
- ಸಂದರ್ಶನ (ಅಗತ್ಯವಿದ್ದರೆ)
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಮಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಇತ್ತೀಚಿನ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳು, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಏಪ್ರಿಲ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಮೇ 2025
AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ