ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 ||ಶಿರಸ್ತೇದಾರ್/ಉಪ ತಹಶೀಲ್ದಾರ್, ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆಫ್ಲೈನ್ ನಲ್ಲಿ ಅರ್ಜಿ ಆಹ್ವಾನ

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 :  ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 03 ಶಿರಸ್ತೇದಾರ್/ಉಪ ತಹಶೀಲ್ದಾರ್, ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಹುದ್ದೆಯ ವಿವರಗಳು, ಅರ್ಹತಾ ಮಾನದಮಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಪರಿವಿಡಿ

  • ಸಂಸ್ಥೆಯ ಹೆಸರು : ಕರ್ನಾಟಕ ಕಂದಾಯ ಇಲಾಖೆ
  • ಹುದ್ದೆಯ ಹೆಸರು : ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹಾಗೂ ಇತರ ಹುದ್ದೆಗಳು
  • ಒಟ್ಟು ಹುದ್ದೆಗಳು : 03 ಹುದ್ದೆಗಳು
  • ಅರ್ಜಿ ಸ್ವರೂಪ : ಆಫ್ಲೈನ್ ಮೂಲಕ
  • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ

ಹುದ್ದೆಗಳ ವಿವರಗಳು

  • ಶಿರಸ್ತೇದಾರ್/ಉಪ ತಹಶೀಲ್ದಾರ್ : 1 ಹುದ್ದೆ
  • ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ : 1 ಹುದ್ದೆ
  • ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್‌ವರ್ಕಿಂಗ್ ಮ್ಯಾನೇಜರ್ : 1 ಹುದ್ದೆ

ಅರ್ಹತಾ ಮಾನದಂಡಗಳ ವಿವರಗಳು

ಶೈಕ್ಷಣಿಕ ಅರ್ಹತೆ :

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಬಿಐ, ಎಂ.ಟೆಕ್, ಎಂ.ಕಾಂ, ಎಂ.ಎಸ್ಸಿ  ಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ :

  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 65 ವರ್ಷಗಳು
  • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ವೇತನ ಶ್ರೇಣಿ

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.45000 – 55000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ

ಮಾನದಂಡಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ

  • ಲಿಖಿತ ಪರೀಕ್ಷೆ
  • ಸಂದರ್ಶನ

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

  • ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ,
  • ನೇಮಕಾತಿ ಲಿಂಕ್ ಮೇಲೆ ಕ್ಲಿಕ್‌ ಮಾಡಿ, ಅರ್ಜಿಯನ್ನು ಡೌನ್ಲೋಡ್‌ ಮಾಡಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
  • ಅರ್ಜಿಯನ್ನು ಭರ್ತಿ ಮಾಡಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಒಮ್ಮೆ ಪರಿಶೀಲಿಸಿ.
  • ಅರ್ಜಿ ನಮೂನೆಯ ಜೊತೆಗೆ ಸ್ವಯಂ ದಾಖಲೆಗಳ ವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕೊನೆಯ ದಿನಾಂಕದೊಳಗೆ ಕಳುಹಿಸಿ.

ಅರ್ಜಿ ಕಳುಹಿಸುವ ವಿಳಾಸ :

ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಂ ಬ್ಲಾಕ್, 03 ನೇ ಮತ್ತು 04 ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಅಕ್ಟೋಬರ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09 ನವೆಂಬರ್ 2025

ಪ್ರಮುಖ ಲಿಂಕ್‌ ಗಳು

ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

Author: admin

Leave a Reply

Your email address will not be published. Required fields are marked *