ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ವಿಮಾನೋದ್ಯಮ ಅಭಿವೃದ್ಧಿ ಸಂಸ್ಥೆ (ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ – ADA) ಸೀಮಿತ ಅವಧಿಯ ಗುತ್ತಿಗೆ ಆಧಾರದ ಮೇಲೆ ಒಟ್ಟು 137 ಪ್ರಾಜೆಕ್ಟ್ ಸೈಂಟಿಸ್ಟ್ ‘ಬಿ’ ಮತ್ತು ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ ಹುದ್ದೆಗಳ ನೇಮಕಾತಿಗಾಗಿ ಅಧಿಕೃ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಕಾಂಕ್ಷಿಗಳು ಭಾರತದ ಏರೋನಾಟಿಕಲ್ ಪ್ರಗತಿಗೆ ಕೊಡುಗೆ ನೀಡಲು ಇದು ಒಂದು ಸುವರ್ಣಾವಕಾಶ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಎಡಿಎ ನೇಮಕಾತಿಗೆ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿಯ ಹುದ್ದೆಯ ವಿವರ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ನೇಮಕಾತಿಯ ವಿವರ
- ಸಂಸ್ಥೆಯ ಹೆಸರು : ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ – ADA
- ಹುದ್ದೆಯ ಹೆಸರು : ಪ್ರಾಜೆಕ್ಟ್ ಸೈಂಟಿಸ್ಟ್
- ಒಟ್ಟು ಹುದ್ದೆಗಳು : 137 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋ ಸ್ಥಳ : ಬೆಂಗಳೂರು (ಕರ್ನಾಟಕ)
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಹುದ್ದೆಯ ವಿವರ
- ಯೋಜನಾ ವಿಜ್ಞಾನಿ ‘ಬಿ’ : 105 ಹುದ್ದೆಗಳು
- ಯೋಜನಾ ವಿಜ್ಞಾನಿ ‘ಸಿ’ : 32 ಹುದ್ದೆಗಳು
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಅರ್ಹತಾ ಮಾನದಂಡಗಳು
ವಿದ್ಯಾರ್ಹತೆ :
- ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ / ಬಿ.ಟೆಕ್ (ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಎಲೆಕ್ಟ್ರಿಕಲ್ & ಇನ್ಸ್ಟ್ರುಮೆಂಟೇಶನ್/ಮೆಕ್ಯಾನಿಕಲ್/ಮೆಟಲರ್ಜಿ/ಏರೋನಾಟಿಕಲ್ ಎಂಜಿನಿಯರಿಂಗ್) ಪದವಿಯನ್ನು ಪೂರ್ಣಗೊಳಿಸಿರಬೇಕು.
- ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಅನುಭವ
ವಯೋಮಿತಿ :
- ಯೋಜನಾ ವಿಜ್ಞಾನಿ ‘ಬಿ’ : 18 ರಿಂದ 35 ವರ್ಷಗಳು
- ಯೋಜನಾ ವಿಜ್ಞಾನಿ ‘ಸಿ’ : 18 ರಿಂದ 40 ವರ್ಷಗಳು
- ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಮಾಸಿಕ ವೇತನ
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಪ್ರಾಜೆಕ್ಟ್ ಸೈಂಟಿಸ್ಟ್ ‘ಬಿ’ : ರೂ. 90789/-
- ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ : ರೂ. 108073/-
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಅರ್ಜಿ ಶುಲ್ಕ
ಆಕಾಂಕ್ಷಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.
- ಶಾರ್ಟ್ ಲಿಸ್ಟ್
- ವೈಯಕ್ತಿಕ ಸಂದರ್ಶನ
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಕಂಡ ಹಂತಗಳನ್ನು ಅನುಸರಿಸಬೇಕು.
- ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 ರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ವೈಯಕ್ತಿಕ ವಿವರಗಳು, ಶೈಕ್ಷಣಿಕ ದಾಖಲೆಗಳನ್ನು ಭರ್ತಿ ಮಾಡಿ
- ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ, ಸಹಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿ ಪ್ರಿಂಟ್ ಔಟ್ ತೆಗೆದುಕೊಳ್ಳಿ
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಮಾರ್ಚ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಏಪ್ರಿಲ್ 2025
ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ