KSRLPS ನೇಮಕಾತಿ 2025 : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಒಟ್ಟು 13 ಕ್ಲಸ್ಟರ್ ಮೇಲ್ವಿಚಾರಕ, ಬ್ಲಾಕ್ ವ್ಯವಸ್ಥಾಪಕ, ಕಚೇರಿ ಸಹಾಯಕ, ಜಿಲ್ಲಾ ವ್ಯವಸ್ಥಾಪಕ ಜೀವನೋಪಾಯ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಗಳಲ್ಲಿ ಆಸಕತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
KSRLPS ನೇಮಕಾತಿ 2025 : ನೇಮಕಾತಿಯ ಮುಖ್ಯಾಂಶಗಳು
- ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ (KSRLPS)
- ಹುದ್ದೆಯ ಹೆಸರು : ಕ್ಲಸ್ಟರ್ ಮೇಲ್ವಿಚಾರಕ, ಬ್ಲಾಕ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳು
- ಒಟ್ಟು ಹುದ್ದೆಗಳು : 13 ಹುದ್ದೆಗಳು
- ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
ಹುದ್ದೆಯ ವಿವರಗಳು
- ಜಿಲ್ಲಾ ವ್ಯವಸ್ಥಾಪಕ : 1
- ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ : 1
- ಬ್ಲಾಕ್ ಮ್ಯಾನೇಜರ್-ಫಾರ್ಮ್ ಲೈವ್ಲಿಹುಡ್ಸ್ : 4
- ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ : 1
- ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ : 1
- ಕ್ಲಸ್ಟರ್ ಮೇಲ್ವಿಚಾರಕರು : 2
- ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ – SVEP :1
- ಕಚೇರಿ ಸಹಾಯಕ : 1
- ಜಿಲ್ಲಾ ವ್ಯವಸ್ಥಾಪಕ (ಜೀವನೋಪಾಯ) : 1
ಅರ್ಹತಾ ಮಾನದಂಡಗಳ ವಿವರ
ಶೈಕ್ಷಣಿಕ ಅರ್ಹತೆ :
ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಆಕಾಂಕ್ಷಿಗಳು ಪದವಿ, ಸ್ನಾತಕೋತ್ತರ ಪದವಿ, MBA / MSW, B.Sc / M.Sc ಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ :
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು
- ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ವೇತನ ಶ್ರೇಣಿ
ಅಧಿಸೂಚನೆಯ ನಿಯಮಗಳ ಪ್ರಕಾರ, ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ
- ಲಿಖಿತ ಪರೀಕ್ಷೆ
- ಸಂದರ್ಶನ
KSRLPS ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- KSRLPS ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಮೇ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಮೇ 2025
ಪ್ರಮುಖ ಲಿಂಕ್‌ಗಳು
ಅಧಿಸೂಚನೆ / ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ