afp header code starts here --> afp header code starts here -->

NIACL ಅಪ್ರೆಂಟಿಸ್ ನೇಮಕಾತಿ 2025 || ಒಟ್ಟು 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

NIACL ಅಪ್ರೆಂಟಿಸ್ ನೇಮಕಾತಿ 2025 : ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾದ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್, ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ ಮುಕ್ತ ಮಾರುಕಟ್ಟೆಯಿಂದ 500 ಅಪ್ರೆಂಟಿಸ್‌ಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. NIACL ಅಪ್ರೆಂಟಿಸ್ ನೇಮಕಾತಿ 2025 ಪದವೀಧರರಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಮೂಲಕ ವಿಮಾ ವಲಯದಲ್ಲಿ ಅಮೂಲ್ಯವಾದ ಅನುಭವವನ್ನು ಪಡೆಯಲು ಅತ್ಯುತ್ತಮ ಅವಕಾಶವಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

NIACL ಅಪ್ರೆಂಟಿಸ್ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
  • ಸಂಸ್ಥೆಯ ಹೆಸರು : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್, (NIACL)
  • ಹುದ್ದೆಯ ಹೆಸರು : ಅಪ್ರೆಂಟಿಸ್‌ ಹುದ್ದೆಗಳು
  • ಒಟ್ಟು ಹುದ್ದೆಗಳು : 500 ಹುದ್ದೆಗಳು
  • ಉದ್ಯೋಗ ಸ್ಥಳ : ಭಾರತದಾದ್ಯಂತ
  • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
ಹುದ್ದೆಯ ವಿವರಗಳು

ಅಪ್ರೆಂಟಿಸ್‌ಗಳು : 500 ಹುದ್ದೆಗಳು

ಅರ್ಹತಾ ಮಾನದಂಡಗಳು

ಶೈಕ್ಷಣಿಕ ಅರ್ಹತೆ :

  • ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ / ತತ್ಸಮಾನ.
  • ಆಕಾಂಕ್ಷಿಯೂ ಅರ್ಜಿ ಸಲ್ಲಿಸುತ್ತಿರುವ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಪ್ರಾದೇಶಿಕ ಭಾಷೆಯ ಜ್ಞಾನ ಅತ್ಯಗತ್ಯ.

ವಯೋಮಿತಿ :

  • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 21 ವರ್ಷಗಳು
  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
  • ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
ವೇತನಶ್ರೇಣಿ

ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ರೂ. 9,000/- ಮಾಸಿಕ ವೇತನವನ್ನು ನೀಡಲಾಗುತ್ತದೆ

ಅರ್ಜಿ ಶುಲ್ಕ
  • ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : 944/-
  • ಎಸ್‌ಸಿ / ಎಸ್‌ಟಿ / ಎಲ್ಲಾ ಮಹಿಳೆಯರಿಗೆ : 708/-
  • ಪಿಎಚ್ (ದೈಹಿಕ ಅಂಗವಿಕಲತೆ) : 472/-

ಪಾವತಿ ವಿಧಾನ : ಆನ್ಲೈನ್‌ ಮೂಲಕ ಪಾವತಿಸಬೇಕು

ಆಯ್ಕೆ ಪ್ರಕ್ರಿಯೆ

ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ

  • ಲಿಖಿತ ಪರೀಕ್ಷೆ
  • ಸ್ಥಳೀಯ ಭಾಷಾ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ
NIACL ಅಪ್ರೆಂಟಿಸ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
  • NIACL ಅಪ್ರೆಂಟಿಸ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಮದಾಯಿಸಿ
  • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
  • ನಿಮ್ಮ ಫೋಟೋ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
  • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06 ಜೂನ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಜೂನ್‌ 2025
ಪ್ರಮುಖ ಲಿಂಕ್‌ಗಳು

ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

Comments

Leave a Reply

Your email address will not be published. Required fields are marked *