afp header code starts here --> afp header code starts here -->

SBI ನೇಮಕಾತಿ 2025 || ಒಟ್ಟು 5180 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶ

SBI ನೇಮಕಾತಿ 2025 : ಭಾರತದ ಅತ್ಯಂತ ದೊಡ್ಡ ಬ್ಯಾಂಕಿಂಗ್‌ ಸಂಸ್ಥೆಗಳಲ್ಲಿ ಒಂದಾದ ಸ್ಟೇಟ್‌ ಬ್ಯಾಂಕ್‌ ಇಂಡಿಯಾ (SBI) ಒಟ್ಟು 5180 ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. SBI ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

SBI ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
  • ಸಂಸ್ಥೆಯ ಹೆಸರು : ಸ್ಟೇಟ್‌ ಬ್ಯಾಂಕ್‌ ಇಂಡಿಯಾ (SBI)
  • ಹುದ್ದೆಯ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್)
  • ಒಟ್ಟು ಹುದ್ದೆಗಳು : 5180 ಹುದ್ದೆಗಳು
  • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
  • ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಗಳ ವಿವರಗಳು
  • ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) : 5180 ಹುದ್ದೆಗಳು
  • ಕರ್ನಾಟಕದಲ್ಲಿ : 270 ಹುದ್ದೆಗಳು
ಅರ್ಹತಾ ಮಾನದಂಡಗಳ ವಿವರಗಳು

ಶೈಕ್ಷಣಿಕ ಅರ್ಹತೆ :

ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ :

  • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು

ವಯೋಮಿತಿ ಸಡಿಲಿಕೆ :

  • ಒಬಿಸಿ (ಎನ್‌ಸಿಎಲ್) ಆಕಾಂಕ್ಷಿಗಳು : 03 ವರ್ಷಗಳು
  • ಎಸ್‌ ಸಿ / ಎಸ್‌ ಟಿ ಆಕಾಂಕ್ಷಿಗಳು : 05 ವರ್ಷಗಳು
  • ಪಿಡಬ್ಲ್ಯೂಬಿಡಿ (ಯುಆರ್/ಇಡಬ್ಲ್ಯೂಎಸ್)ಆಕಾಂಕ್ಷಿಗಳು : 10 ವರ್ಷಗಳು
ವೇತನ ಶ್ರೇಣಿ

ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.24050/- ರಿಂದ 64480/- ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ
  • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
  • ಯುಆರ್ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.750/-
ಆಯ್ಕೆ ಪ್ರಕ್ರಿಯೆ
  • ಪೂರ್ವಭಾವಿ ಪರೀಕ್ಷೆ (ಆನ್‌ಲೈನ್)
  • ಮುಖ್ಯ ಪರೀಕ್ಷೆ (ಆನ್‌ಲೈನ್)
  • ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
  • ದಾಖಲೆ ಪರಿಶೀಲನೆ
  • ಅಂತಿಮ ಆಯ್ಕೆ
SBI ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
  • SBI ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
  • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
ಪರೀಕ್ಷಾ ಕೇಂದ್ರಗಳು

ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಾಗ ತಮಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಕರ್ನಾಟಕ ರಾಜ್ಯದಲ್ಲಿ ಲಭ್ಯವಿರುವ ಪರೀಕ್ಷಾ ಕೇಂದ್ರಗಳ ಪಟ್ಟಿ…

  • ಹಾಸನ
  • ಬಳ್ಳಾರಿ
  • ಬೆಂಗಳೂರು
  • ಬೆಳಗಾವಿ
  • ದಾವಣಗೆರೆ
  • ಗುಲ್ಬರ್ಗಾ
  • ಹುಬ್ಬಳ್ಳಿ
  • ಧಾರವಾಡ
  • ಮಂಗಳೂರು
  • ಮೈಸೂರು
  • ಶಿವಮೊಗ್ಗ
  • ಉಡುಪಿ
ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06 ಆಗಸ್ಟ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಆಗಸ್ಟ್ 2025
  • ಪರೀಕ್ಷೆ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು
ಪ್ರಮುಖ ಲಿಂಕ್‌ ಗಳು

ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

Comments

Leave a Reply

Your email address will not be published. Required fields are marked *