SSC ನೇಮಕಾತಿ 2025 : ಸಿಬ್ಬಂದಿ ಆಯ್ಕೆ ಆಯೋಗ ( ಸ್ಟಾಫ್ ಸೆಲೆಕ್ಷನ್ ಕಮಿಷನ್ – SSC) ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಸಬ್-ಇನ್ಸ್‌ಪೆಕ್ಟರ್‌ಗಳ (SI) ನೇಮಕಾತಿಗಾಗಿ, ಪುರುಷರು ಮತ್ತು ಮಹಿಳೆಯರು ಸೇರಿದಂತೆ ಕೇಂದ್ರ ಪೊಲೀಸ್ ಸಂಸ್ಥೆ (CPO) ಪರೀಕ್ಷೆಯ ಒಟ್ಟು 3073 ಸಬ್-ಇನ್ಸ್‌ಪೆಕ್ಟರ್ (GD & ಕಾರ್ಯನಿರ್ವಾಹಕ) ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಬಯಸುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. SSC ನೇಮಕಾತಿಯ ಹುದ್ದೆ ವಿವರಗಳು ,ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲ ತಿಳಿದುಕೊಳ್ಳಬಹುದು.
SSC ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
- ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
- ಹುದ್ದೆಯ ಹೆಸರು : ಸಬ್-ಇನ್‌ಸ್ಪೆಕ್ಟರ್ (ಜಿಡಿ & ಎಕ್ಸಿಕ್ಯುಟಿವ್) ಹುದ್ದೆಗಳು
- ಒಟ್ಟು ಹುದ್ದೆಗಳು : 3073 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಗಳ ವಿವರಗಳು
- ಸಿಆರ್‌ಪಿಎಫ್ : 1029 ಹುದ್ದೆಗಳು
- ಬಿಎಸ್ಎಫ್ : 223 ಹುದ್ದೆಗಳು
- ಐಟಿಬಿಪಿ : 233 ಹುದ್ದೆಗಳು
- ಸಿಐಎಸ್ಎಫ್ : 1294 ಹುದ್ದೆಗಳು
- ಎಸ್‌ಎಸ್‌ಬಿ : 82 ಹುದ್ದೆಗಳು
- ದೆಹಲಿ ಪೊಲೀಸರು : 212 ಹುದ್ದೆಗಳು
ಅರ್ಹತಾ ಮಾನದಂಡಗಳ ವಿವರಗಳು
ಶೈಕ್ಷಣಿಕ ಅರ್ಹತೆ :
SSC ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ
ಪದವಿಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು
ವಯೋಮಿತಿ ಸಡಿಲಿಕೆ :
- ಒಬಿಸಿ ಆಕಾಂಕ್ಷಿಗಳು, ಮಾಜಿ ಸೈನಿಕರು : 03 ವರ್ಷಗಳು
- SC / ST ಆಕಾಂಕ್ಷಿಗಳಿಗೆ : 05 ವರ್ಷಗಳು
ವೇತನ ಶ್ರೇಣಿ
SSC ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.35,400 – 1,12,400/- ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
- ಸಾಮಾನ್ಯ ವರ್ಗ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.100/-
- SC / ST / ಮಾಜಿ ಸೈನಿಕರ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
ಆಯ್ಕೆ ಪ್ರಕ್ರಿಯೆ
- ಪತ್ರಿಕೆ 1 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
- ದೈಹಿಕ ಪ್ರಮಾಣೀಕರಣ ಪರೀಕ್ಷೆ (PST) / ದೈಹಿಕ ಸಹಿಷ್ಣುತೆ ಪರೀಕ್ಷೆ (PET)
- ಪತ್ರಿಕೆ 2 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
- ವೈದ್ಯಕೀಯ ಪರೀಕ್ಷೆ
ಅಂತಿಮ ಆಯ್ಕೆಯು ಅಭ್ಯರ್ಥಿಯ ಪೇಪರ್ 1, ಪಿಇಟಿ/ಪಿಎಸ್‌ಟಿ, ಪೇಪರ್ 2 ಮತ್ತು ವೈದ್ಯಕೀಯ ಫಿಟ್‌ನೆಸ್‌ನಲ್ಲಿನ ಕಾರ್ಯಕ್ಷಮತೆಯನ್ನು ಆಧರಿಸಿರುತ್ತದೆ
SSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- SSC ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ)
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಸೆಪ್ಟೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಅಕ್ಟೋಬರ್ 2025
- ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿ : ನವೆಂಬರ್-ಡಿಸೆಂಬರ್, 2025
ಪ್ರಮುಖ ಲಿಂಕ್ ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ