KVAFSU ನೇಮಕಾತಿ 2025 : ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU) 25 ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಅಥವಾ ಪ್ರಾಧ್ಯಾಪಕ ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೀದರ್ ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. KVAFSU ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲಖನದ ಮೂಲಕ ತಿಳಿದುಕೊಳ್ಳಬಹುದು.
KVAFSU ನೇಮಕಾತಿ 2025
KVAFSU ನೇಮಕಾತಿಯ ಹೈಲೈಟ್ಸ್
- ಸಂಸ್ಥೆಯ ಹೆಸರು : ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU)
- ಹುದ್ದೆಯ ಹೆಸರು : ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕ
- ಒಟ್ಟು ಹುದ್ದೆಗಳು : 25 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಕರ್ನಾಟಕ – ಬೀದರ್
ಹುದ್ದೆಯ ವಿವರಗಳು
- ಪ್ರಾಧ್ಯಾಪಕರು : 5 ಹುದ್ದೆಗಳು
- ಅಸೋಸಿಯೇಟ್ ಪ್ರೊಫೆಸರ್ : 5 ಹುದ್ದೆಗಳು
- ಸಹಾಯಕ ಪ್ರಾಧ್ಯಾಪಕರು : 15 ಹುದ್ದೆಗಳು
KVAFSU ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು
ಶೈಕ್ಷಣಿಕ ಅರ್ಹತೆ :
KVAFSU ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಪಿಎಚ್‌ಡಿ ಯನ್ನು ಪೂರ್ಣಗೊಳಿಸಿಬೇಕು.
ವಯೋಮಿತಿ :
- ಅಕಾಂಕ್ಷಿಗಳ ಗರಿಷ್ಠ ವಯಸ್ಸು : 38 ವರ್ಷಗಳು
ವಯೋಮಿತಿ ಸಡಿಲಿಕೆ :
- ಒಬಿಸಿ ಆಕಾಂಕ್ಷಿಗಳಿಗೆ : 3 ವರ್ಷಗಳು
- ಎಸ್ ಸಿ / ಎಸ್ ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು
ವೇತನ ಶ್ರೇಣಿ ವಿವರಗಳು
KVAFSU ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಪ್ರಾಧ್ಯಾಪಕರು : 144,200 ರಿಂದ 2,78,200/-
- ಅಸೋಸಿಯೇಟ್ ಪ್ರೊಫೆಸರ್ : 1,31,400 ರಿಂದ 2,17,100/-
- ಸಹಾಯಕ ಪ್ರಾಧ್ಯಾಪಕರು : 57,700 ರಿಂದ 1,82,400/-
ಅರ್ಜಿ ಶುಲ್ಕ
- GM/ 2A/ 2B/ 3A/ 3B ಆಕಾಂಕ್ಷಿಗಳಿಗೆ : 1000/-
- ಎಸ್ ಸಿ / ಎಸ್ ಟಿ / ಪ್ರವರ್ಗ-I ಆಕಾಂಕ್ಷಿಗಳಿಗೆ : 500/-
ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ
- ಶಾರ್ಟ್ ಲಿಸ್ಟ್
- ಸಂದರ್ಶನ
KVAFSU ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- KVAFSU ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ ಮತ್ತು ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ.
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
KVAFSU ನೇಮಕಾತಿ 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ನವೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13 ಡಿಸೆಂಬರ್ 2025
ಪ್ರಮುಖ ಲಿಂಕ್ ಗಳು
| ಅಧಿಸೂಚನೆ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಲೀಂಕ್ | ಮೇಲೆ ಕ್ಲಿಕ್ ಮಾಡಿ |