CBI ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (ಸಿಬಿಐ) ದೇಶಾದ್ಯಂತ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಒಟ್ಟು 4500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ ಮತ್ತು ಬ್ಯಾಂಕಿನ ಅಪ್ರೆಂಟಿಸ್‌ಶಿಪ್ ನೀತಿಯ ಪ್ರಕಾರ ಭರ್ತಿ ಮಾಡಲಾಗುವುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 : ನೇಮಕಾತಿಯ ವಿವರಗಳು
- ಸಂಸ್ಥೆಯ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI)
- ಹುದ್ದೆಯ ಹೆಸರು : ಅಪ್ರೆಂಟಿಸ್ ಹುದ್ದೆಗಳು
- ಒಟ್ಟು ಹುದ್ದೆಗಳು : 4500 ಹುದ್ದೆಗಳು
- ಉದ್ಯೋಗ ಸ್ಥಳ : ಭಾರತದಾದ್ಯಂತ
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
CBI ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರ
ವಿದ್ಯಾರ್ಹತೆ :
ಆಕಾಂಕ್ಷಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು. ಅಥವಾ ತತ್ಸಮಾನ ಅರ್ಹತೆಗಳನ್ನು ಹೊಂದಿರಬೇಕು.
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು
ವೇತನ ಶ್ರೇಣಿ
ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ 15000 /- ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
- ಎಸ್ ಸಿ / ಎಸ್ ಟಿ ಆಕಾಂಕ್ಷಿಗಳಿಗೆ : 600 /-
- ಓಬಿಸಿ / ಸಮಾನ್ಯ ವರ್ಗದ ಆಕಾಂಕ್ಷಿಗಳಿಗೆ : 800 /-
- ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 400 /-
ಆಯ್ಕೆಪ್ರಕ್ರಿಯೆ
- ಆನ್ಲೈನ್ ಪರೀಕ್ಷೆ
- ದಾಖಲೆ ಪರಿಶೀಲನೆ
- ಮೆರಿಟ್ ಪಟ್ಟಿ
- ವೈದ್ಯಕೀಯ ಪರೀಕ್ಷೆ
CBI ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- CBI ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ವೈಯಕ್ತಿಕ/ಶೈಕ್ಷಣಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07 ಜೂನ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಜೂನ್ 2025
ಪ್ರಮುಖ ಲಿಂಕ್ ಗಳು
ಅಧಿಕಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ
Leave a Reply