Home ಸರ್ಕಾರಿ ಸೌಲಭ್ಯಗಳುಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ! Government Employee Computer Literacy Test Requested in Extended Date.-2024

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ! Government Employee Computer Literacy Test Requested in Extended Date.-2024

by admin
20250101 141659

ಬೆಂಗಳೂರು ಡಿಸೆಂಬರ್ 25 ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಈ ಪರೀಕ್ಷೆ ಉತ್ತೀರ್ಣರಾಗಲು 2024 ಡಿಸೆಂಬರ್ 31 ಕೊನೆಯ ದಿನ ಎಂದು ಈ ಹಿಂದೆ ಆದೇಶವನ್ನು ಸರ್ಕಾರ ಹೊರಡಿಸಿತು ಆದರೆ ಈಗ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗಲು ಇರುವ ಗುಡುವು ವಿಸ್ತರಣೆ ಮಾಡುವ ನಿರೀಕ್ಷೆ ಇದೆ, ಒಂದು ವರ್ಷ ಗಡುವು ವಿಸ್ತರಣೆ ಮಾಡಬೇಕೆಂದು ಸರ್ಕಾರಕ್ಕೆ ಸರ್ಕಾರಿ ನೌಕರರು ಮನವಿ ಪತ್ರವನ್ನು ಬರೆಯಲಾಗಿದೆ ಎಂದು ಮಾಹಿತಿ ಇದೆ

ಮುಖ್ಯ ಕಾರ್ಯನಿರ್ವಹಣೆ ಅಧಿಕಾರಿಗಳು ಈ ಆಡಳಿತ ಕೇಂದ್ರ ಬೆಂಗಳೂರು ಕುರಿತು ಮಾನ್ಯ ಕಾರ್ಯದರ್ಶಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದಾರೆ ಈ ಪತ್ರವೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಅವಧಿಯನ್ನು ದಿನಾಂಕ 31 12 2025 ವರೆಗೆ ಕಾಲಾವಕಾಶ ಕುರಿತು ಎಂದು ವಿಷಯವನ್ನು ಒಳಗೊಂಡಿರುತ್ತದೆ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪತ್ರದ ವಿವರಗಳು ಕೆಳಗಿನಂತಿವೆ:

ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಯಮ ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಸರ್ಕಾರವು ದಿನಾಂಕ 31 12 2024 ರವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿತು ಆದರೆ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣ ಅವಧಿ, ಮುಂಬಡ್ತಿ, ಹಾಗೂ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಪರೀಕ್ಷೆ ತೆಗೆದುಕೊಳ್ಳದೆ ಇರುವ ಸರ್ಕಾರಿ ನೌಕರರು ತೆಗೆದುಕೊಂಡು ಉತ್ತೀರ್ಣರಾಗಲು ತಿಳಿಸಲಾಗಿದೆ ಆದರೆ 24ರ ಜನವರಿಯಿಂದ ಈವರೆಗೆ ಕಿಯೋನಿಕ್ಸ್ ಸಂಸ್ಥೆಯಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗದೆ ಇದ್ದ ಕಾರಣ ಇನ್ನು ಸುಮಾರು 1,40 ಲಕ್ಷಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಮತ್ತು ನೌಕರುಗಳು ಹಾಗೂ ನಿಗಮ ಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ

ಈ ಅಂಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ 31 ಡಿಸೆಂಬರ್ 2025 ರವರೆಗೆ ಅವಧಿಯನ್ನು ಮುಂದೂಡಿ ಎಂದು ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ

ಸರ್ಕಾರ ದಿನಾಂಕ 31.12-2022 ಒಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು ಎಂದು ಆದೇಶಿಸಿತ್ತು ಬಳಿಕ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಂತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕವನ್ನು ಮುಂದೂಡಲಾಗಿತ್ತು ಮತ್ತೊಂದು ಆದೇಶದಲ್ಲಿ 31-12-2024ರ ಅಂತಿಮ ಗಡುವು ನೀಡಲು ಆದೇಶ ಹೊರಡಿಸಿತ್ತು ಆದರೆ ಈ ಪುನಃ ಒಂದು ವರ್ಷ ವಿಸ್ತರಣೆ ಮನವಿ ಸಲ್ಲಿಕೆಯಾಗಿದೆ, ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆ ಸಾಮಾನ್ಯ ಜ್ಞಾನ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ನಿಯಮಗಳು 2012 ರೂಪಿಸಿದೆ ಈ ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊಲದಪಡಿಸಿ 50 ವರ್ಷಗಳ ವಯಸ್ಸಾಗಿರುವ ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಮಾಡುವುದು ಕಡ್ಡಾಯ ಎಂದು ಆದೇಶಿಸಲಾಗಿದೆ

ಈ ಪರೀಕ್ಷೆಯನ್ನು ನಡೆಸಿ ಅಧಿಕಾರಿ ನೌಕರರಿಗೆ ಕಂಪ್ಯೂಟರ್ ಪ್ರಮಾಣ ಪತ್ರವನ್ನು ನೀಡುವ ಜವಾಬ್ದಾರಿಯನ್ನು ಸಂಸ್ಥೆಗೆ ನೀಡಲಾಗಿದೆ ಆದರೆ ಸಂಸ್ಥೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗದ ಕಾರಣ ಇನ್ನು ಸುಮಾರು 1,40 ಲಕ್ಷಕ್ಕೂ ಅಧಿಕ ಅಧಿಕಾರಿ ನೌಕರರು ಪರೀಕ್ಷೆ ಪಾಸ್ ಮಾಡಬೇಕಾಗಿದೆ ಎಂದು ಹೇಳಿದೆ ಆದ್ದರಿಂದ ಸರ್ಕಾರ ದ ಪರೀಕ್ಷೆ ಕಡ್ಡಾಯವಾಗಿ ಪಾಸ್ ಮಾಡುವ ಅವಧಿಯನ್ನು ವಿಸ್ತರಣೆ ಮಾಡುವುದು ಖಚಿತವಾಗಿದೆ ಆದರೆ ಈ ಕುರಿತು ಇನ್ನೂ ಆದೇಶ ಪ್ರಕಟಿಸಲಾಗಿಲ್ಲ ಪ್ರಕಟಿಸಿದ ನಂತರ ನಮ್ಮ ಈ ಜಾಲತಾಣದಲ್ಲಿ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇವೆ

ಗಮನಿಸಿ : ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಇನ್ನು ಪಾಸ್ ಆಗದೆ ಇರುವ ನೌಕರರು ನಿಮಗೆ ಈ ಪರೀಕ್ಷೆಯಲ್ಲಿ ಪಾಸ್ ಆಗಲು ಆಸಕ್ತಿ ಇದ್ದರೆ ಕಂಪ್ಯೂಟರ್ ಜ್ಞಾನವನ್ನು ಪಡೆದುಕೊಂಡು ಪರೀಕ್ಷೆಗೆ ಸಿದ್ಧರಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಮಾಡುವುದು ಹೇಗೆ ಎಂದು ಕಂಪ್ಯೂಟರ್ ಸೆಂಟರ್ ಅಲ್ಲಿ ನಿಮಗೆ ಹೇಳಿಕೊಡಲಾಗುತ್ತದೆ ಮತ್ತು ಯಾವ ಯಾವ ಅಂಶಗಳನ್ನು ಓದಿಕೊಳ್ಳಬೇಕು ಪರೀಕ್ಷೆಗೆ ಹೇಗೆ ಸಿದ್ಧರಾಗಬೇಕು ಮತ್ತು ಯಾವ ರೀತಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಎದುರಿಸಬೇಕು ಹಾಗೂ ಪ್ರಶ್ನೆ ಗಳನ್ನು ಯಾವ ರೀತಿ ನೀಡಲಾಗುತ್ತದೆ ಎಂಬ ಮಾದರಿ ಪ್ರಶ್ನೆಗಳನ್ನು ನಿಮಗೆ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್ ಗಳಲ್ಲಿ ಹೇಳಿಕೊಡಲಾಗುತ್ತದೆ ಆದ್ದರಿಂದ ಇನ್ನೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಾಸ್ ಆಗದೆ ಇರುವ ನೌಕರರು ಮಾಹಿತಿ ಪಡೆದುಕೊಳ್ಳಬಹುದು

You may also like

Leave a Comment