HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ವಿವಿಧ ವಿಭಾಗಗಳಲ್ಲಿ ಒಟ್ಟು 63 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಪ್ರತಿಭಾನ್ವಿತ ಆಕಾಂಕ್ಷಿಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ಆರಂಭವಾಗಿದ್ದು, ಕೊನೆಯ ದಿನಾಂಕದೊಳಗೆ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿಯ ವಿವರಗಳು, ಅರ್ಹತಾ ಮಾನದಂಡಗಳು, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ನೇಮಕಾತಿಯ ವಿವರ
- ಸಂಸ್ಥೆಯ ಹೆಸರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)
- ಹುದ್ದೆಯ ಹೆಸರು : ಜೂನಿಯರ್ ಎಕ್ಸಿಕ್ಯೂಟಿವ್
- ಒಟ್ಟು ಹುದ್ದೆಗಳು : 63 ಹುದ್ದೆಗಳು
- ವರ್ಗ : ಸರ್ಕಾರಿ ಉದ್ಯೋಗ
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಭಾರತದಾದ್ಯಂತ
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಹುದ್ದೆಯ ವಿವರ
- ಜೂನಿಯರ್ ಎಕ್ಸಿಕ್ಯುಟಿವ್ – ಮೆಕ್ಯಾನಿಕಲ್ : 11 ಹುದ್ದೆಗಳು
- ಜೂನಿಯರ್ ಎಕ್ಸಿಕ್ಯೂಟಿವ್ – ಎಲೆಕ್ಟ್ರಿಕಲ್ : 17 ಹುದ್ದೆಗಳು
- ಜೂನಿಯರ್ ಎಕ್ಸಿಕ್ಯುಟಿವ್ – ಇನ್ಸ್ಟ್ರುಮೆಂಟೇಶನ್ : 06 ಹುದ್ದೆಗಳು
- ಜೂನಿಯರ್ ಎಕ್ಸಿಕ್ಯೂಟಿವ್ – ಕೆಮಿಕಲ್ : 01 ಹುದ್ದೆಗಳು
- ಜೂನಿಯರ್ ಎಕ್ಸಿಕ್ಯುಟಿವ್ – ಅಗ್ನಿಶಾಮಕ ಮತ್ತು ಸುರಕ್ಷತೆ : 28 ಹುದ್ದೆಗಳು
- ಒಟ್ಟು : 63 ಹುದ್ದೆಗಳು
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಅರ್ಹತಾ ಮಾನದಂಡಗಳ
ವಿದ್ಯಾರ್ಹತೆ :
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.
- ಜೂನಿಯರ್ ಎಕ್ಸಿಕ್ಯುಟಿವ್ – ಮೆಕ್ಯಾನಿಕಲ್ : ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ
- ಜೂನಿಯರ್ ಎಕ್ಸಿಕ್ಯೂಟಿವ್ – ಎಲೆಕ್ಟ್ರಿಕಲ್ : ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ
- ಜೂನಿಯರ್ ಎಕ್ಸಿಕ್ಯುಟಿವ್ – ಇನ್ಸ್ಟ್ರುಮೆಂಟೇಶನ್ : ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ
- ಜೂನಿಯರ್ ಎಕ್ಸಿಕ್ಯೂಟಿವ್ – ಕೆಮಿಕಲ್ : ಕೆಮಿಕಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ
- ಜೂನಿಯರ್ ಎಕ್ಸಿಕ್ಯುಟಿವ್ – ಅಗ್ನಿಶಾಮಕ ಮತ್ತು ಸುರಕ್ಷತೆ : ವಿಜ್ಞಾನ ಪದವಿ ಅಗ್ನಿಶಾಮಕ ಮತ್ತು ಸುರಕ್ಷತೆಯಲ್ಲಿ ಡಿಪ್ಲೊಮಾ
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು
ವಯಸ್ಸಿನ ಸಡಿಲಿಕೆ :
- ಎಸ್ ಸಿ / ಎಸ್ ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು
- ಒಬಿಸಿ ಆಕಾಂಕ್ಷಿಗಳಿಗೆ : 3 ವರ್ಷಗಳು
- ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 10 ವರ್ಷಗಳು
- ಪಿಡಬ್ಲ್ಯೂಬಿಡಿ (ಒಬಿಸಿ-ಎನ್‌ಸಿಎಲ್) : 13 ವರ್ಷಗಳು
- ಪಿಡಬ್ಲ್ಯೂಬಿಡಿ (ಎಸ್ ಸಿ / ಎಸ್ ಟಿ) : 15 ವರ್ಷಗಳು
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಮಾಸಿಕ ವೇತನ
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ ಆಕಾಂಕ್ಷಿಗಳಿಗೆ ರೂ. 30,000 – ರೂ. 1,20,000/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
- ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ಆಕಾಂಕ್ಷಿಗಳಿಗೆ : ರೂ. 1,180/- (18% GST)
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ : ಶುಲ್ಕ ವಿನಾಯಿತಿ
ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಯುಪಿಐ ಮೂಲಕ ಆನ್‌ಲೈನ್ ನಲ್ಲಿ ಪಾವತಿಸಬೇಕು.
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.
- ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
- ಗುಂಪು ಕಾರ್ಯ / ಗುಂಪು ಚರ್ಚೆ
- ಕೌಶಲ್ಯ ಪರೀಕ್ಷೆ
- ಸಂದರ್ಶನ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.
- HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 ರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. hindustanpetroleum.com ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇಮೇಲ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ವೆಬ್ಸೈಟ್‌ಗೆ ಲಾಗಿನ್ ಆಗಿ
- ಅಗತ್ಯವಿರುವ ಶೈಕ್ಷಣಿಕ ದಾಖಲೆ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ಛಾಯಾಚಿತ್ರ, ಸಹಿ, ಎಡಗೈ ಹೆಬ್ಬೆರಳಿನ ಗುರುತು ಮತ್ತು ಇತರ ಅಗತ್ಯ ಅಂಕಪಟ್ಟಿಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸದರೆ ಮಾತ್ರ)
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸರುವ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಮಾರ್ಚ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಏಪ್ರಿಲ್ 2025
- ಪರೀಕ್ಷಾ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು
HPCL ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು
| ಅಧಿಸೂಚನೆ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |