afp header code starts here --> afp header code starts here -->

NHPC ನಾನ್ ಎಕ್ಸಿಕ್ಯೂಟಿವ್ ನೇಮಕಾತಿ 2025 || ಒಟ್ಟು 248 ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನ

NHPC ನಾನ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಭಾರತ ಸರ್ಕಾರದ ಅಧೀನದಲ್ಲಿರುವ ನವರತ್ನ ಕಂಪನಿ ಮತ್ತು ದೇಶದ ಅತಿದೊಡ್ಡ ಜಲವಿದ್ಯುತ್ ಸಂಸ್ಥೆಯಾದ ರಾಷ್ಟ್ರೀಯ ಜಲವಿದ್ಯುತ್ ನಿಗಮ ಲಿಮಿಟೆಡ್ (NHPC) ಒಟ್ಟು 248 ಜೂನಿಯರ್ ಎಂಜಿನಿಯರ್ (JE) ಹಾಗೂ ಸೂಪರ್‌ವೈಸರ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅದಿಕೃತ ವಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

NHPC ನಾನ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಹೈಲೈಟ್ಸ್
  • ಸಂಸ್ಥೆಯ ಹೆಸರು : ರಾಷ್ಟ್ರೀಯ ಜಲವಿದ್ಯುತ್ ನಿಗಮ ಲಿಮಿಟೆಡ್ (NHPC)
  • ಹುದ್ದೆಯ ಹೆಸರು : 248 ಜೂನಿಯರ್ ಎಂಜಿನಿಯರ್ (JE), ಸೂಪರ್‌ವೈಸರ್ ಹಾಗೂ ಇತರ ಹುದ್ದೆಗಳು
  • ಒಟ್ಟು ಹುದ್ದೆಗಳು : 248 ಹುದ್ದೆಗಳು
  • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
  • ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಗಳ ವಿವರಗಳು
  • ಸಹಾಯಕ ರಾಜಭಾಷಾ ಅಧಿಕಾರಿ (E01) : 11 ಹುದ್ದೆಗಳು
  • ಜೂನಿಯರ್ ಎಂಜಿನಿಯರ್ (ಸಿವಿಲ್) : 109 ಹುದ್ದೆಗಳು
  • ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) : 46 ಹುದ್ದೆಗಳು
  • ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) : 49 ಹುದ್ದೆಗಳು
  • ಜೂನಿಯರ್ ಎಂಜಿನಿಯರ್ (ಇ & ಸಿ) : 17 ಹುದ್ದೆಗಳು
  • ಹಿರಿಯ ಲೆಕ್ಕಪತ್ರಗಾರ : 10 ಹುದ್ದೆಗಳು
  • ಮೇಲ್ವಿಚಾರಕ (ಐಟಿ) : 1 ಹುದ್ದೆಗಳು
  • ಹಿಂದಿ ಅನುವಾದಕ : 5 ಹುದ್ದೆಗಳು
ಆಕಾಂಕ್ಷಿಗಳ ಅರ್ಹತಾ ಮಾನದಂಡಗಳ ವಿವರಗಳು

ವಿದ್ಯಾರ್ಹತೆ :

ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಗುರುತಿಸಲಾಗುತ್ತದೆ. ಆಕಾಂಕ್ಷಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ, ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ, DOEACC ‘ಎ’ ಮಟ್ಟದ ಕೋರ್ಸ್‌ನಲ್ಲಿ ಪದವಿ,  ಕಂಪ್ಯೂಟರ್ ಸೈನ್ಸ್ / ಐಟಿಯಲ್ಲಿ ಮೂರು ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೊಮಾ, ಬಿಸಿಎ / ಬಿಎಸ್ಸಿ (ಕಂಪ್ಯೂಟರ್ ಸೈನ್ಸ್ / ಐಟಿ), ಇಂಟರ್ CA ಪಾಸ್ ಅಥವಾ ಇಂಟರ್ CMA ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ :

  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
  • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ವೇತನ ಶ್ರೇಣಿ

ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳಿಗೆ ತಿಂಗಳಿಗೆ  27,000 ರಿಂದ 1,40,000/- ಮಾಸಿಕ ವೇತನವನ್ನು ನೀಡಲಾಗುತ್ತದೆ

ಅರ್ಜಿ ಶುಲ್ಕ
  • ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ ಆಕಾಂಕ್ಷಿಗಳಿಗೆ : ರೂ. 600/- ಜೊತೆಗೆ ಅನ್ವಯವಾಗುವ ತೆರಿಗೆಗಳು ಅಂದರೆ ಪ್ರತಿ ಅರ್ಜಿಗೆ ರೂ. 708/-
  • SC / ST / PwBD / ಮಾಜಿ ಸೈನಿಕರು / ಮಹಿಳಾ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
ಆಯ್ಕೆ ಪ್ರಕ್ರಿಯೆ
  • ಲಿಖಿತ ಪರೀಕ್ಷೆ
  • ಸಂದರ್ಶನ
NHPC ನಾನ್ ಎಕ್ಸಿಕ್ಯೂಟಿವ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
  • NHPC ನಾನ್ ಎಕ್ಸಿಕ್ಯೂಟಿವ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್ ಮಾಡಿ
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ, (ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಆಗಸ್ಟ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಅಕ್ಟೋಬರ್ 2025
ಪ್ರಮುಖ ಲಿಂಕ್ಗಳು

ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

Comments

Leave a Reply

Your email address will not be published. Required fields are marked *