SBI ನೇಮಕಾತಿ 2025 : ಭಾರತದ ಅತ್ಯಂತ ದೊಡ್ಡ ಬ್ಯಾಂಕಿಂಗ್ ಸಂಸ್ಥೆಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಇಂಡಿಯಾ (SBI) ಒಟ್ಟು 5180 ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. SBI ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
SBI ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
- ಸಂಸ್ಥೆಯ ಹೆಸರು : ಸ್ಟೇಟ್ ಬ್ಯಾಂಕ್ ಇಂಡಿಯಾ (SBI)
- ಹುದ್ದೆಯ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್)
- ಒಟ್ಟು ಹುದ್ದೆಗಳು : 5180 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಗಳ ವಿವರಗಳು
- ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) : 5180 ಹುದ್ದೆಗಳು
- ಕರ್ನಾಟಕದಲ್ಲಿ : 270 ಹುದ್ದೆಗಳು
ಅರ್ಹತಾ ಮಾನದಂಡಗಳ ವಿವರಗಳು
ಶೈಕ್ಷಣಿಕ ಅರ್ಹತೆ :
ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು
ವಯೋಮಿತಿ ಸಡಿಲಿಕೆ :
- ಒಬಿಸಿ (ಎನ್‌ಸಿಎಲ್) ಆಕಾಂಕ್ಷಿಗಳು : 03 ವರ್ಷಗಳು
- ಎಸ್ ಸಿ / ಎಸ್ ಟಿ ಆಕಾಂಕ್ಷಿಗಳು : 05 ವರ್ಷಗಳು
- ಪಿಡಬ್ಲ್ಯೂಬಿಡಿ (ಯುಆರ್/ಇಡಬ್ಲ್ಯೂಎಸ್)ಆಕಾಂಕ್ಷಿಗಳು : 10 ವರ್ಷಗಳು
ವೇತನ ಶ್ರೇಣಿ
ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.24050/- ರಿಂದ 64480/- ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
- ಎಸ್ ಸಿ / ಎಸ್ ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
- ಯುಆರ್ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.750/-
ಆಯ್ಕೆ ಪ್ರಕ್ರಿಯೆ
- ಪೂರ್ವಭಾವಿ ಪರೀಕ್ಷೆ (ಆನ್‌ಲೈನ್)
- ಮುಖ್ಯ ಪರೀಕ್ಷೆ (ಆನ್‌ಲೈನ್)
- ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
- ದಾಖಲೆ ಪರಿಶೀಲನೆ
- ಅಂತಿಮ ಆಯ್ಕೆ
SBI ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- SBI ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.
ಪರೀಕ್ಷಾ ಕೇಂದ್ರಗಳು
ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಾಗ ತಮಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಕರ್ನಾಟಕ ರಾಜ್ಯದಲ್ಲಿ ಲಭ್ಯವಿರುವ ಪರೀಕ್ಷಾ ಕೇಂದ್ರಗಳ ಪಟ್ಟಿ…
- ಹಾಸನ
- ಬಳ್ಳಾರಿ
- ಬೆಂಗಳೂರು
- ಬೆಳಗಾವಿ
- ದಾವಣಗೆರೆ
- ಗುಲ್ಬರ್ಗಾ
- ಹುಬ್ಬಳ್ಳಿ
- ಧಾರವಾಡ
- ಮಂಗಳೂರು
- ಮೈಸೂರು
- ಶಿವಮೊಗ್ಗ
- ಉಡುಪಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06 ಆಗಸ್ಟ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಆಗಸ್ಟ್ 2025
- ಪರೀಕ್ಷೆ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು
ಪ್ರಮುಖ ಲಿಂಕ್ ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ