ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ದೇಶದ 3ನೇ ಅತಿದೊಡ್ಡ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಆಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ) ಒಟ್ಟು 1,425 ಕಚೇರಿ ಸಹಾಯಕ , ಸ್ಕೇಲ್ I ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್), ಸ್ಕೇಲ್ II ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬ್ಯಾಂಕ್ ನಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಮೂ ಲಕ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು. ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ಹೈಲೈಟ್ಸ್
- ಸಂಸ್ಥೆಯ ಹೆಸರು : ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ)
- ಹುದ್ದೆಯ ಹೆಸರು : ಕಚೇರಿ ಸಹಾಯಕ , ಸ್ಕೇಲ್ I ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್), ಸ್ಕೇಲ್ II ಆಫೀಸರ್ ಹುದ್ದೆಗಳು
- ಒಟ್ಟು ಹುದ್ದೆಗಳು : 1,425 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ವಿವರಗಳು
- ಕಚೇರಿ ಸಹಾಯಕ (ಗುಮಾಸ್ತ) : 800 ಹುದ್ದೆಗಳು
- ಸಹಾಯಕ ವ್ಯವಸ್ಥಾಪಕ (ಅಧಿಕಾರಿ ಸ್ಕೇಲ್-I) : 500 ಹುದ್ದೆಗಳು
- ವ್ಯವಸ್ಥಾಪಕ (ಆಫೀಸರ್ ಸ್ಕೇಲ್-II) : 125 ಹುದ್ದೆಗಳು
ಅರ್ಹತಾ ಮಾನದಂಡಗಳ ವಿವರಗಳು
ಶೈಕ್ಷಣಿಕ ಅರ್ಹತೆ :
- ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮಾನವಾದ ಪದವಿ ಯನ್ನು ಹೊಂದಿರಬೇಕು
- ಸ್ಥಳೀಯ ಭಾಷೆಯ (ಕನ್ನಡ) ಜ್ಞಾನ ಅಗತ್ಯ
ವಯೋಮಿತಿ :
- ಕಚೇರಿ ಸಹಾಯಕ (ಗುಮಾಸ್ತ) : 18 – 28 ವರ್ಷಗಳು
- ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-I) : 18 – 30 ವರ್ಷಗಳು
- ಮ್ಯಾನೇಜರ್ (ಆಫೀಸರ್ ಸ್ಕೇಲ್-II) : 21 – 32 ವರ್ಷಗಳು
- ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಮಾಸಿಕ ವೇತನ
ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಕಚೇರಿ ಸಹಾಯಕ (ಗುಮಾಸ್ತ) : 35,000 – 37,000 ರೂಪಾಯಿಗಳು
- ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-I) : 75,000 – 77,000 ರೂಪಾಯಿಗಳು
- ಮ್ಯಾನೇಜರ್ (ಆಫೀಸರ್ ಸ್ಕೇಲ್-II) : 65,000 – 67,000 ರೂಪಾಯಿಗಳು
ಅರ್ಜಿ ಶುಲ್ಕ
- ಸಾಮಾನ್ಯ ವರ್ಗ / ಒಬಿಸಿ ಆಕಾಂಕ್ಷಿಗಳಿಗೆ : 850/-
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 175/-
ಆಯ್ಕೆ ಪ್ರಕ್ರಿಯೆ
- ಪೂರ್ವಭಾವಿ ಪರೀಕ್ಷೆ
- ಮುಖ್ಯ ಪರೀಕ್ಷೆ
- ಸಂದರ್ಶನ
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ / ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಸೆಪ್ಟೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಸೆಪ್ಟೆಂಬರ್ 2025
ಪ್ರಮುಖ ಲಿಂಕ್ ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲೀಮಕ್ : ಮೇಲೆ ಕ್ಲಿಕ್ ಮಾಡಿ