afp header code starts here --> afp header code starts here -->

Tag: KSCCF RECRUITMENT

  • KSCCF ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ ನೇಮಕಾತಿ 2025 || ದ್ವಿತೀಯ ಪಿಯುಸಿ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

    KSCCF ನೇಮಕಾತಿ 2025 : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ ಒಟ್ಟು 34 ಸೇಲ್ಸ್ ಸಹಾಯಕ, ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. KSCCF ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    KSCCF ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF)
    • ಹುದ್ದೆಯ ಹೆಸರು :  ಮಾರಾಟ ಸಹಾಯಕ, ಔಷಧಿಕಾರ ಹುದ್ದೆಗಳು
    • ಒಟ್ಟು ಹುದ್ದೆಗಳು : 34 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು
    • ಔಷಧಿಕಾರ : 7 ಹುದ್ದೆಗಳು
    • ಪ್ರಥಮ ದರ್ಜೆ ಸಹಾಯಕ : 10 ಹುದ್ದೆಗಳು
    • ಮಾರಾಟ ಸಹಾಯಕ : 17 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಗುರುತಿಸಲಾಗುತ್ತದೆ.

    • ಔಷಧಿಕಾರ : ಆಕಾಂಕ್ಷಿಗಳು ಫಾರ್ಮಸಿಯಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು
    • ಪ್ರಥಮ ದರ್ಜೆ ಸಹಾಯಕ : ಆಕಾಂಕ್ಷಿಗಳು ಪದವಿಯನ್ನು ಪೂರ್ಣಗೊಳಿಸಿರಬೇಕು
    • ಮಾರಾಟ ಸಹಾಯಕ : 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
    ವೇತನ ಶ್ರೇಣಿ

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ ಆಯ್ಕೆ ಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ   ₹12,500 ರಿಂದ 29,600/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • SC / ST / ಪ್ರವರ್ಗ-I /PWD ಆಕಾಂಕ್ಷಿಗಳಿಗೆ : ರೂ.500/-
    • ಇತರ ಎಲ್ಲಾ ಆಕಾಂಕ್ಷಿಗಳಿಗೆ : ರೂ.1000/-

    ಪಾವತಿ ವಿಧಾನ : ಆಕಾಂಕ್ಷಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    KSCCF ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • KSCCF ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ.
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16 ಆಗಸ್ಟ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ